Publish Date: Tue, 12 May 2026 (16:58 IST)
Updated Date: Tue, 12 May 2026 (17:01 IST)
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ಅಕ್ರಮ ಹಿನ್ನಲೆಯಲ್ಲಿ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದಾಗಿದೆ. ಇದರ ಬಗ್ಗೆ ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹಂಚಿಕೊಂಡಿದ್ದಾರೆ.
ವೈದ್ಯಕೀಯ ಶಿಕ್ಷಣ ಕೋರ್ಸ್ ಗೆ ಪ್ರವೇಶ ಪಡೆಯಲು ನಡೆಸಲಾಗುವ ನೀಟ್ ಪರೀಕ್ಷೆಗಾಗಿ ಎಷ್ಟೋ ವಿದ್ಯಾರ್ಥಿಗಳು ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ಓದಿ ತಯಾರಾಗುತ್ತಾರೆ. ಈ ವರ್ಷವೂ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉಸ್ಸಪ್ಪಾ ಎಂದು ಉಸಿರು ಬಿಟ್ಟಿದ್ದರು.
ಆದರೆ ಅಷ್ಟರಲ್ಲಿ ರಾಜಸ್ತಾನ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ವರದಿಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಪರೀಕ್ಷಾ ಪ್ರಾಧಿಕಾರ ಇಡೀ ರಾಷ್ಟ್ರದಲ್ಲಿ ಪರೀಕ್ಷೆ ರದ್ದುಗೊಳಿಸಿದೆ. ಇದರಿಂದ ಒಮ್ಮೆ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ ಈಗ ಮತ್ತೆ ಪರೀಕ್ಷೆಗೆ ಅರ್ಜಿ ಹಾಕಿ ಬರೆಯುವ ತಲೆನೋವು.
ಹೀಗಾಗಿ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಒಮ್ಮೆ ಮುಗಿಯುತು ಎಂದುಕೊಂಡರೆ ಇನ್ನು ಶುರುವಿನಿಂದ ನಾವು ಕಷ್ಟಪಡಬೇಕು. ಹಿಂದೆ ಮಾಡಿದ್ದ ತಯಾರಿಗಳೆಲ್ಲಾ ವೇಸ್ಟ್ ಆಯ್ತು. ಈ ರೀತಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ