Select Your Language

Notifications

webdunia
webdunia
webdunia
webdunia

ಸುರಂಗ ಮಾರ್ಗ ಕುಸಿತ !

ಸುರಂಗ ಮಾರ್ಗ ಕುಸಿತ !
ಶ್ರೀನಗರ , ಭಾನುವಾರ, 22 ಮೇ 2022 (08:40 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು,

36 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಚರಣೆ ಬಳಿಕ ಇಲ್ಲಿಯವರೆಗೆ ಅವಶೇಷಗಳಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ-ಜಮ್ಮು ಹೆದ್ದಾರಿಯ ಖೋನಿನಲ್ಲ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಭಾರೀ ಭೂಕುಸಿತ ಉಂಟಾಗಿತ್ತು. ಪರಿಣಾಮ ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿದ್ದರು.

ಸುರಂಗ ನಿರ್ಮಿಸುತ್ತಿದ್ದ ಕಂಪನಿ ರಕ್ಷಣಾ ಮಾನದಂಡಗಳನ್ನು ಅನುಸರಿಸದಿರುವುದೇ ದುರಂತಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಂಪನಿ ನಿರ್ಲಕ್ಷ್ಯಕ್ಕೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆಲಸದಾಕೆಯ ಕೂದಲು ಕತ್ತರಿಸಿ ಚಿತ್ರಹಿಂಸೆ!