Publish Date: Wed, 09 Dec 2020 (08:28 IST)
Updated Date: Wed, 09 Dec 2020 (08:31 IST)
ನವದೆಹಲಿ : ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ವಿವಾಹದ ಮೆರವಣೆಗೆ ಸಾಗುತ್ತಿದ್ದ ವೇಳೆ 27 ವರ್ಷದ ವರನಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಘಟನೆ ನಡೆದಿದೆ.
ರಾಮನ್ (27) ಗುಂಡೇಟು ತಿಂದ ವರ. ಕೆಲವು ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಬಂದು ರಥದಲ್ಲಿ ಕುಳಿತಿದ್ದ ವರನಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತಕ್ಷಣ ಗಾಯಗೊಂಡ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.