Publish Date: Sat, 10 Apr 2021 (07:39 IST)
Updated Date: Sat, 10 Apr 2021 (07:40 IST)
ಮೊರಾದಾಬಾದ್ : ವಿವಾಹಿತ ವ್ಯಕ್ತಿಯೊಬ್ಬ ತನ್ನ ಗೆಳೆತಿಯ ಜೊತೆ ಸೇರಿ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಪ್ರಾಣಕ್ಕಾಗಿ ಹೋರಾಡುತ್ತಿರುವ ಘಟನೆ ಮೊರಾದಾಬಾದ್ ನಲ್ಲಿ ನಡೆದಿದೆ.
ವ್ಯಕ್ತಿಗೆ 2 ವರ್ಷಗಳ ಹಿಂದೆ ಮದುವೆಯಾಗಿತ್ತು. ಈತ ಒಮ್ಮೆ ತನ್ನ ಚಿಕ್ಕಪ್ಪನ ಮನೆಗೆ ಬಂದಾಗ ಅಲ್ಲಿ ಸಂಬಂಧಿ ಯುವತಿಯೊಬ್ಬಳ ಜೊತೆ ಸಂಬಂಧ ಬೆಳೆಸಿದ್ದಾನೆ. ಇವರ ಸಂಬಂಧಕ್ಕೆ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಅವರು ಮನೆಬಿಟ್ಟು ಹೊರ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.