Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

Sampriya

Delhi , ಗುರುವಾರ, 14 ಮಾರ್ಚ್ 2024 (17:45 IST)
Photo Courtesy X
ನವದೆಹಲಿ: ರಾಜ್ಯಸಭೆ ಸದಸ್ಯೆಯಾಗಿ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. 
 
ಅವರು  ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು ಓದುವ ಮೂಲಕ ಮೆಚ್ಚುಗೆ ಗಳಿಸಿದರು. ರಾಜ್ಯಸಭೆಯ ಅಧ್ಯಕ್ಷ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ರಾಜ್ಯಸಭಾ ನಾಯಕ ಪಿಯೂಷ್‌ ಗೋಯಲ್‌ ಮತ್ತಿತರರು  ಉಪಸ್ಥಿತರಿದ್ದರು. ಅದಲ್ಲದೆ ಸುಧಾ ಮೂರ್ತಿ ಅವರ ಪತಿ ನಾರಾಯಣ ಮೂರ್ತಿ ಈ ವೇಳೆ ಹಾಜರಿದ್ದರು. 
 
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾರ್ಚ್‌ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದರು. 
 
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನಂತರ ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಎರಡನೇ ಸದಸ್ಯರಾಗಿದ್ದಾರೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಾಪ ಸಿಂಹ ನನ್ನ ಸಹೋದರನಂತೆ ಎಂದ ಯದುವೀರ್ ಒಡೆಯರ್