Select Your Language

Notifications

webdunia
webdunia
webdunia
webdunia

ಜೈಲಿನಲ್ಲಿ ಕೂಗಾಡುತ್ತಿರುವ ಕೈದಿ ಸುಧಾಕರನ್

ಜೈಲಿನಲ್ಲಿ ಕೂಗಾಡುತ್ತಿರುವ ಕೈದಿ ಸುಧಾಕರನ್
ಬೆಂಗಳೂರು , ಬುಧವಾರ, 22 ಫೆಬ್ರವರಿ 2017 (16:34 IST)
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ವಿ.ಕೆ.ಶಶಿಕಲಾರೊಂದಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸುಧಾಕರನ್ ಜೈಲಿನಲ್ಲಿ ಕೂಗಾಟ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಅಕ್ರಮ ಆಸ್ತಿ ಪ್ರಕರಣದಲ್ಲಿ ಕೈದಿಯಾಗಿರುವ ಸುಧಾಕರನ್ ಸಹ ಕೈದಿಗಳೊಂದಿಗೆ ಮತ್ತು ಜೈಲಿನ ಅಧಿಕಾರಿಗಳೊಂದಿಗೆ ವಾಗ್ವಾದದಲ್ಲಿ ತೊಡಗಿದ್ದಾನೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
 
ಮನೆಯ ಊಟ ಮಾಡಲು ಅವಕಾಶ ಕೊಡಬೇಕು, ಭೇಟಿಯಾಗಲು ಬಂದವರಿಗೆ ಅವಕಾಶ ಕೊಡಬೇಕು ಎನ್ನುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಜೈಲಿನ ಅಧಿಕಾರಿಗಳ ಮುಂದಿಡುತ್ತಿದ್ದಾನೆ. ಆದರೆ, ಮನೆಯ ಊಟಕ್ಕೆ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಸುಧಾಕರ್ ಆಕ್ರೋಶಗೊಂಡಿದ್ದಾನೆ ಎನ್ನಲಾಗಿದೆ.
 
ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಸುಧಾಕರನ್ ಬೇಡಿಕೆಗಳನ್ನು ಸಾರಾ ಸಗಟಾಗಿ ತಿರಸ್ಕಿರಿಸಿದ್ದು, ನ್ಯಾಯಾಲಯದ ಆದೇಶದಂತೆ ಕಾರ್ಯನಿರ್ವಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
 
ಅಕ್ರಮ ಆಸ್ತಿ ಪ್ರಕರಣದಲ್ಲಿ ವಿ.ಕೆ.ಶಶಿಕಲಾ, ಇಳವರಸಿ ಮತ್ತು ಸುಧಾಕರನ್ ಅಪರಾಧಿಗಳಾಗಿದ್ದು ತಲಾ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬ್ಲಾಕ್‌ಮೇಲ್ ಕೇಸ್: ಪ್ರೇಮಲತಾ ದಂಪತಿ ನಾರಾಯಣ್ ಶಾಸ್ತ್ರಿಗೆ ಕ್ಲೀನ್ ಚಿಟ್