ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ.
ಡಿಎಸ್‌ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ನಡೆಸುತ್ತಿದೆ. ಇಂದು ಬೆಂಗಳೂರಿಗೆ ಬಂದ ಎನ್‌ಐಎ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿಯೂ ಹೊರಬಿದ್ದಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಮೇ 1ರಂದು ಗುಂಪೊಂದು ಕಾರಿನಲ್ಲಿ ಅಡ್ಡಗಟ್ಟಿ ಏಕಾಏಕಿ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಪೊಲೀಸರು ಈ ಹತ್ಯೆ ಸಂಬಂಧ ಈಗಾಗಲೇ 12 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.