Webdunia - Bharat's app for daily news and videos

Install App

ಸುನಂದಾ ಪುಷ್ಕರ್ ಪ್ರಕರಣ: ಪ್ರಮುಖ ಸಾಕ್ಷಿಗಳಿಗೆ ಸುಳ್ಳು ಪತ್ತೆ ಪರೀಕ್ಷೆ

Webdunia
ಗುರುವಾರ, 21 ಮೇ 2015 (09:30 IST)
ಮಾಜಿ ಕೇಂದ್ರ ಸಚಿವ ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ  ಮೂವರು ಪ್ರಮುಖ ಸಾಕ್ಷಿಗಳಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. 

ಥರೂರ್ ಅವರ ಮನೆಗೆಲಸದ ಆಳು ನರೇನ್ ಸಿಂಗ್, ಚಾಲಕ ಭಜರಂಗಿ ಮತ್ತು ಕುಟುಂಬದ ಆಪ್ತ ಸಂಜಯ್ ದೇವನ್  ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ದೆಹಲಿ ಪೊಲೀಸರು ಕೋರ್ಟ್ ಅನುಮತಿಯನ್ನು ಕೇಳಿದ್ದರು.  
 
ಈ ಮೂವರು ಸಾಕ್ಷಿಗಳು ಕೆಲವೊಂದು ಪ್ರಶ್ನೆಗೆ ಮೌನವನ್ನು ಕಾಯ್ದುಕೊಳ್ಳುತ್ತಿದ್ದಾರೆ ಅಥವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಳಷ್ಟು ಸತ್ಯಗಳನ್ನು ಮರೆಮಾಚುತ್ತಿದ್ದಾರೆ ಎಂಬುದು ಪೊಲೀಸರ ಅನುಮಾನ. ಈ ಮೂವರನ್ನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನಿಸಲಾಗಿದ್ದು. ತಮ್ಮ ಸಂಶಯಕ್ಕೆ ಪೂರಕವಾದ ಅಂಶಗಳನ್ನು ಸಹ ಪೊಲೀಸರು ಪಟ್ಟಿ ಮಾಡಿದ್ದಾರೆ. ಈ ಮೂವರು ಥರೂರ್ ಕುಟುಂಬದ ನಿಕಟವರ್ತಿಗಳಾಗಿದ್ದಾರೆ. 
 
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರು ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೋಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17, 2014ರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದರು.
 
ಅವರ ಸಾವಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. 
 
ಸುನಂದಾ ಅವರದು ಆತ್ಮಹತ್ಯೆ, ಸಹಜ ಸಾವಲ್ಲ. ಅದೊಂದು ಕೊಲೆ ಎಂದು ದೆಹಲಿ ಪೊಲೀಸ್ ಆಯುಕ್ತ  ಬಿ.ಎಸ್. ಬಸ್ಸಿ  ಕಳೆದ ಜನವರಿ ತಿಂಗಳಲ್ಲಿ ಹೇಳಿಕೆ ನೀಡಿದ್ದರು. ಅಲ್ಲದೇ ದೆಹಲಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments