ನವದೆಹಲಿ: ಸನಾತನ ಧರ್ಮಕ್ಕೆ ಅವಮಾನ ಮಾಡುವುದನ್ನು ಸಹಿಸಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರತ್ತ ಶೂ ಎಸೆಯಲು ಮುಂದಾದ ವಕೀಲರೊಬ್ಬರನ್ನು ಬಂಧಿಸಲಾಗಿದೆ.
ಮಧ್ಯಪ್ರದೇಶದ ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ದೇವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ವಿರುದ್ಧ ರೊಚ್ಚಿಗೆದ್ದ 71 ವರ್ಷದ ಹಿರಿಯ ವಕೀಲರೊಬ್ಬರು ಶೂ ಎಸೆಯಲು ಮುಂದಾಗಿದ್ದಾರೆ.
ತಕ್ಷಣವೇ ಅವರನ್ನು ಕೋರ್ಟ್ ರೂಂನಿಂದ ಹೊರಗೆಳೆದು ಕರೆದೊಯ್ಯಲಾಗಿದೆ. ಈ ವೇಳೆ ಸನಾತನ ಧರ್ಮಕ್ಕೆ ಅಪಮಾನವಾದರೆ ಸಹಿಸಲ್ಲ ಎಂದು ವಕೀಲರು ಸಿಟ್ಟಿನಿಂದ ಕೂಗಿ ಹೇಳಿದ್ದಾರೆ. ಆದರೆ ಇದರ ನಡುವೆಯೂ ನಾವು ಯಾರೂ ಇಂತಹ ಘಟನೆಗಳಿಂದ ವಿಚಲಿತರಾಗಬಾರದು ಎಂದು ಸಿಜೆಐ ಗವಾಯಿ ಇತರೆ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿದ್ದಾರೆ.