ಸನಾತನ ಧರ್ಮಕ್ಕೆ ಅಪಮಾನ ಸಹಿಸಲ್ಲ ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳಿಗೇ ಶೂ ಎಸೆಯಲೆತ್ನಿಸಿದ ವಕೀಲ

Krishnaveni K
ಸೋಮವಾರ, 6 ಅಕ್ಟೋಬರ್ 2025 (13:26 IST)
Photo Credit: X
ನವದೆಹಲಿ: ಸನಾತನ ಧರ್ಮಕ್ಕೆ ಅವಮಾನ ಮಾಡುವುದನ್ನು ಸಹಿಸಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರತ್ತ ಶೂ ಎಸೆಯಲು ಮುಂದಾದ ವಕೀಲರೊಬ್ಬರನ್ನು ಬಂಧಿಸಲಾಗಿದೆ.

ಮಧ್ಯಪ್ರದೇಶದ ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ದೇವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ವಿರುದ್ಧ ರೊಚ್ಚಿಗೆದ್ದ 71 ವರ್ಷದ ಹಿರಿಯ ವಕೀಲರೊಬ್ಬರು ಶೂ ಎಸೆಯಲು ಮುಂದಾಗಿದ್ದಾರೆ.

ತಕ್ಷಣವೇ ಅವರನ್ನು ಕೋರ್ಟ್ ರೂಂನಿಂದ ಹೊರಗೆಳೆದು ಕರೆದೊಯ್ಯಲಾಗಿದೆ. ಈ ವೇಳೆ ಸನಾತನ ಧರ್ಮಕ್ಕೆ ಅಪಮಾನವಾದರೆ ಸಹಿಸಲ್ಲ ಎಂದು ವಕೀಲರು ಸಿಟ್ಟಿನಿಂದ ಕೂಗಿ ಹೇಳಿದ್ದಾರೆ. ಆದರೆ ಇದರ ನಡುವೆಯೂ ನಾವು ಯಾರೂ ಇಂತಹ ಘಟನೆಗಳಿಂದ  ವಿಚಲಿತರಾಗಬಾರದು ಎಂದು ಸಿಜೆಐ ಗವಾಯಿ ಇತರೆ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments