ಮದ್ಯಪ್ರಿಯರಿಗೆ ಬಹುದೊಡ್ಡ ಶಾಕಿಂಗ್ ಸುದ್ದಿ ಇದು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿ ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.
ಹೆದ್ದಾರಿಗಳಲ್ಲಿ ಕುಡಿದು ವಾಹನ ಚಲಾಯಿಸಿ ಅಪಘಾತಕ್ಕೆ ಈಡಾಗುವವರ ಸಂಖ್ಯೆ ಜಾಸ್ತಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಇನ್ನು ಮುಂದೆ ರಾಜ್ಯ, ರಾಷ್ಟ್ರ ಹೆದ್ದಾರಿಗಳಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಬಾರದೆಂದು ಆದೇಶಿಸಿದೆ. ಜತೆಗೆ ಈಗ ಇರುವ ಮದ್ಯದಂಗಡಿಗಳನ್ನು ಏಪ್ರಿಲ್ 1, 2017ರೊಳಗೆ ಖಾಲಿ ತೆರವುಗೊಳಿಸಬೇಕು ಎಂದು ಆದೇಶಿಸಿದೆ.
ಮದ್ಯದಂಗಡಿಗಳು ಹೆದ್ದಾರಿಯಿಂದ 500ಮೀಟರ್ ದೂರವಿರಬೇಕು ಎಂದು ಸುಪ್ರೀಂ ಈ ಸಂದರ್ಭದಲ್ಲಿ ನಿರ್ದೇಶನ ನೀಡಿದೆ.
ಕುಡಿದು ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಿದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸುಪ್ರೀಂ ಈ ತೀರ್ಮಾನಕ್ಕೆ ಬಂದಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ನಡೆದಿರುವ ಸುಮಾರು 1.18 ಲಕ್ಷ ಅಪಘಾತ ಪ್ರಕರಣಗಳಿಗೆ ಕುಡಿದು ವಾಹನ ಚಾಲನೆ ಮಾಡಿರುವುದೇ ಕಾರಣ ಎಂಬುದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ