Webdunia - Bharat's app for daily news and videos

Install App

ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂಕೋರ್ಟ್ ತಡೆ

Webdunia
ಮಂಗಳವಾರ, 13 ಜೂನ್ 2023 (12:55 IST)
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ.
 
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತಿಮ ನೀತಿಯನ್ನು ರೂಪಿಸುವವರೆಗೆ ದೆಹಲಿಯ ರಸ್ತೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಬೈಕ್ ಟ್ಯಾಕ್ಸಿಗಳನ್ನು ನಡೆಸುವ ರ್ಯಾಪಿಡೋ ಮತ್ತು ಉಬರ್ಗಳಿಗೆ ದೆಹಲಿಯಲ್ಲಿ ಕಾರ್ಯನಿರ್ವಹಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಇದನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ ಎರಡು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠ ಈ ಮಧ್ಯಂತರ ತಡೆ ನೀಡಿದೆ. 

ಸರ್ಕಾರ ಅಂತಿಮ ನೀತಿಯನ್ನು ಪ್ರಕಟಿಸುವವರೆಗೂ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಆಪ್ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ದೆಹಲಿ ಸರ್ಕಾರದ ಪರ ಹಿರಿಯ ವಕೀಲ ಮನೀಶ್ ವಶಿಷ್ಟ್ ವಾದ ಮಂಡಿಸಿದರು. ಈ ವೇಳೆ ಅಂತಿಮ ನೀತಿಯನ್ನು ಪ್ರಕಟಿಸುವವರೆಗೆ ಸರ್ಕಾರದ ನೋಟಿಸ್ಗೆ ತಡೆ ನೀಡುವ ಹೈಕೋರ್ಟ್ನ ನಿರ್ಧಾರ ರ್ಯಾಪಿಡೋ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಅನುಮತಿಸಿದಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments