Publish Date: Fri, 17 Apr 2026 (15:05 IST)
Updated Date: Fri, 17 Apr 2026 (15:09 IST)
ನವದೆಹಲಿ: ಅಸ್ಸಾಂ ಮುಖ್ಯಮಂತಿ ಹಿಮಂತ ಬಿಸ್ವಾ ಶರ್ಮಾ ಪತ್ನಿ ರಿನಿಕಿ ಭುಯಾನ್ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ.
ಪವನ್ ಖೇರಾ ವಿರುದ್ಧ ರಿನಿಕಿ ಭುಯಾನ್ ಶರ್ಮಾ ಮಾನಹಾನಿ, ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ದೂರು ನೀಡಿದ್ದರು. ಈ ಸಂಬಂಧ ಪವನ್ ಖೇರಾ ಈಗಾಗಲೇ ತೆಲಂಗಾಣ ಹೈಕೋರ್ಟ್ ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದಾಗ ಅಲ್ಲಿ ತಡೆ ನೀಡಲಾಗಿತ್ತು.
ಈಗ ಸಾಗಣೆ ಜಾಮೀನು ವಿಸ್ತರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು ಪವನ್ ಖೇರಾಗೆ ಬಿಗ್ ಶಾಕ್ ಎದುರಾಗಿದೆ. ಇದೀಗ ಅವರು ಅಸ್ಸಾಂ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ನಿರೀಕ್ಷಣಾ ಜಾಮೀನಿಗೆ ಮೊರೆಯಿಡಬೇಕಾಗಿದೆ. ಸುಪ್ರೀಂ ಕೋರ್ಟ್ ಆದೇಶದಿಂದ ಪವನ್ ಖೇರಾಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಇಲ್ಲದಂತಾಗಿದೆ.
ಇದೀಗ ಅವರು ಮತ್ತೆ ಕಾನೂನು ಹೋರಾಟ ನಡೆಸಬೇಕಿದೆ. ಮುಂದೆ ಅವರು ಅಸ್ಸಾಂನಲ್ಲೇ ತಮ್ಮ ವಾದ ಮಂಡಿಸಬೇಕಾಗುತ್ತದೆ. ಒಂದು ವೇಳೆ ಸಕಾಲದಲ್ಲಿ ನ್ಯಾಯಾಲಯವು ಕಾರ್ಯನಿರ್ವಹಿಸದೇ ಇದ್ದಲ್ಲಿ ರಿಜಿಸ್ಟ್ರಿಗೆ ವಿನಂತಿ ಸಲ್ಲಿಸಲು ಅವರಿಗೆ ಅವಕಾಶ ನೀಡಲಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ