ನವದೆಹಲಿ: ನೀಟ್ ಪರೀಕ್ಷಾ ಫಲಿತಾಂಶದ ಬಗ್ಗೆ ಇರುವ ಗೊಂದಲ ನಿವಾರಣೆಯಾಗಿದೆ. ಶೀಘ್ರವೇ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಸಿಬಿಎಸ್ಇ ಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲವಿತ್ತು ಎನ್ನುವ ಕಾರಣಕ್ಕೆ ಮದ್ರಾಸ್ ಹೈಕೋರ್ಟ್ ಫಲಿತಾಂಶಕ್ಕೆ ತಡೆಯಾಜ್ಞೆ ನೀಡಿತ್ತು. ಆದರೆ ಈ ಬಗ್ಗೆ ಸಿಬಿಎಸ್ಇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದು ಲಕ್ಷಗಟ್ಟಲೆ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಫಲಿತಾಂಶಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಗೆ ಅಧಿಕಾರವಿಲ್ಲ ಎಂದು ತೀರ್ಪಿತ್ತಿದೆ. ಅಲ್ಲದೆ ತಕ್ಷಣದಿಂದಲೇ ವೈದ್ಯಕೀಯ ಕೋರ್ಸ್ ಗಳಿಗೆ ಕೌನ್ಸೆಲಿಂಗ್ ಆರಂಭಿಸಬಹುದು ಎಂದು ಸೂಚಿಸಿದೆ.