Select Your Language

Notifications

webdunia
webdunia
webdunia
webdunia

ನ್ಯಾಯಾಂಗ ವ್ಯವಸ್ಥೆ ಬಗ್ಗೆ ತಿರುಗಿ ಬಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು!

ನ್ಯಾಯಾಂಗ ವ್ಯವಸ್ಥೆ ಬಗ್ಗೆ ತಿರುಗಿ ಬಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು!
ನವದೆಹಲಿ , ಶುಕ್ರವಾರ, 12 ಜನವರಿ 2018 (17:24 IST)
ನವದೆಹಲಿ: ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗ ವ್ಯವಸ್ಥೆ ಇದುವರೆಗೆ ಯಾವುದೇ  ತಕರಾರುಗಳಿಲ್ಲದೇ ಶಾಂತಯುತವಾಗಿತ್ತು. ಆದರೆ ಇದೀಗ ದೇಶದ ಸರ್ವೋಚ್ಛ ನ್ಯಾಯಾಲಯ ವ್ಯವಸ್ಥೆಯ ಬಗ್ಗೆ ನ್ಯಾಯಾಧೀಶರಿಂದಲೇ ಅಪಸ್ವರ ಕೇಳಿಬಂದಿದೆ.
 

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ  ದೀಪಕ್ ಮಿಶ್ರಾ ವಿರುದ್ಧ ಹಿರಿಯ ನ್ಯಾಯಮೂರ್ತಿಗಳಾದ ನ್ಯಾ. ಜೆ.ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್, ನ್ಯಾ. ಕುರಿಯನ್ ಜೊಸೆಫ್ ಮತ್ತು ನ್ಯಾ. ಮದನ್ ಲೊಕೂರ್ ಅಪಸ್ವರವೆತ್ತಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಾಗಿಲ್ಲ. ಇದನ್ನು ತಕ್ಷಣವೇ ಸರಿಪಡಿಸಬೇಕಿದೆ. ಇಲ್ಲವಾದಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯೇ ಹದಗೆಡಲಿದೆ ಎಂದು ಎಚ್ಚರಿಸಿ ಇವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ಪತ್ರ ಬರೆದಿದ್ದಾರೆ. ಆದರೆ ಪತ್ರ ಬರೆದರೂ ಮುಖ್ಯ ನ್ಯಾಯಮೂರ್ತಿಗಳು ಬೆಲೆ ಕೊಟ್ಟಿಲ್ಲ ಎಂದು ಈ ನಾಲ್ವರು ಹಿರಿಯ ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಅಪಸ್ವರ ಹೊರಹಾಕಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಸದಸ್ಯರ ಈ ದಿಡೀರ್ ಭಿನ್ನಮತ ದೇಶವನ್ನೇ ಬೆಚ್ಚಿ ಬೀಳಿಸಿದೆ. ನ್ಯಾ.ಚಲಮೇಶ್ವರ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಪ್ರತಿಯಾಗಿ ಕೆಲವೇ ಕ್ಷಣಗಳಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಕೂಡಾ ಸುದ್ದಿಗೋಷ್ಠಿ ಕರೆದಿದ್ದು, ಅವರು ಏನು ಮಾತನಾಡಲಿದ್ದಾರೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ– ಕೆ.ಎಚ್.ಮುನಿಯಪ್ಪ