ನವದೆಹಲಿ : ರಫೇಲ್ ಡೀಲ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಬಗ್ಗೆ ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ಈ ಮೂಲಕ ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ತನಿಖೆಗೆ ಆದೇಶ ಇಲ್ಲ ಎಂದು ಹೇಳಿದೆ.
ರಫೇಲ್ ವಿಮಾನ ಖರೀದಿ ಪ್ರಕ್ರಿಯೆ ಕುರಿತು ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ವಕೀಲರಾದ ಪ್ರಶಾಂತ್ ಭೂಷಣ್, ಎಂಎಲ್ ಶರ್ಮಾ, ಮಾಜಿ ಸಚಿವರಾದ ಯಶವಂತ ಸಿನ್ಹಾ ಮತ್ತು ಅರುಣ್ ಶೌರಿ ಅವರು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ರಫೇಲ್ ಡೀಲ್ ಬಗ್ಗೆ ವಿಸ್ತೃತ ತನಿಖೆಯ ಅಗತ್ಯವಿಲ್ಲ. ಒಪ್ಪಂದದ ವ್ಯವಹಾರದ ಬಗ್ಗೆ ಯಾವುದೇ ಅನುಮಾನವಿಲ್ಲ. ರಕ್ಷಣಾ ಇಲಾಖೆಯ ವ್ಯವಹಾರಗಳಲ್ಲಿ ನ್ಯಾಯಾಂಗದ ಮಧ್ಯಸ್ಥಿಕೆ ಬೇಡ. ಆದ್ದರಿಂದ ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ತನಿಖೆಗೆ ಆದೇಶ ಇಲ್ಲ ಎಂದು ಹೇಳಿದೆ.
ಈ ಮೂಲಕ ಪ್ರಧಾನಿ ಮೋದಿಗೆ ಜಯ ಸಿಕ್ಕಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ಆನೆ ಬಲ ಬಂದಂತಾಗಿದೆ. ಹಾಗೇ ಇದರಿಂದ ಮೋದಿ ವಿರುದ್ಧ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಭಾರೀ ಮುಖಭಂಗವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.