Select Your Language

Notifications

webdunia
webdunia
webdunia
webdunia

ಪ್ಯಾನ್ ಕಾರ್ಡ್`ಗೆ ಆಧಾರ್ ಕಡ್ಡಾಯವೇಕೆ..?: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ

ಪ್ಯಾನ್ ಕಾರ್ಡ್`ಗೆ ಆಧಾರ್ ಕಡ್ಡಾಯವೇಕೆ..?: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ
ನವದೆಹಲಿ , ಶುಕ್ರವಾರ, 21 ಏಪ್ರಿಲ್ 2017 (21:33 IST)
ಪ್ಯಾನ್ ಕಾರ್ಡ್ ಪಡೆಯಲು, ಇನ್ ಕಂ ಟ್ಯಾಕ್ಸ್ ರಿಟರ್ನ್ಸ್ ಫೈಲಿಂಗ್ ವೇಳೆ ಆಧಾರ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರವನ್ನ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಆಧಾರ್ ಕಡ್ಡಾಯ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಕಿ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, ಆಧಾರ್ ಕೇವಲ ಅರ್ಜಿದಾರರ ಆಯ್ಕೆಯಾಗಿರಬೇಕೆಂದು ಹಿಂದಿನ ಆದೇಶದಲ್ಲಿ ತಿಳಿಸಿದ್ದರೂ ಪ್ಯಾನ್ ಕಾರ್ಡ್`ಗೆ ಆಧಾರ್ ಕಡ್ಡಾಯಗೊಳಿಸಿದ್ದೇಕೆ ಎಂದು ಸುಪ್ರೀಂಕೋರ್ಟ್ ಕಟುವಾಗಿ ಪ್ರಶ್ನಿಸಿದೆ.

ಈ ಕುರಿತು, ಕೇಂದ್ರದ ಪರವಾಗಿ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್, ಹಣದ ವರ್ಗಾವಣೆಯಲ್ಲಿ  ಪ್ಯಾನ್ ಕಾರ್ಡ್ ದುರ್ಬಳಕೆಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು.  ಅದನ್ನ ತಡೆಯಲು ಆಧಾರ್ ಕಡ್ಡಾಯಹೊಳಿಸುವುದೊಂದೇ ಮಾರ್ಗವಾಗಿತ್ತು ಎಂದಿದ್ದಾರೆ. ಕಳೆದ ತಿಂಗಳಷ್ಟೇ ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಲಿಂಕ್ ಕಡ್ಡಾಯ ಎಂದು ಕೇಂದ್ರ ಆದೇಶಿಸಿತ್ತು.

ಕಳೆದ ತಿಂಗಳಷ್ಟೇ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್ ಕಡ್ಡಾಯಗೊಳಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಬ್ಯಾಂಕ್ ಖಾತೆ, ಪಾಸ್ ಪೋರ್ಟ್, ಮೊಬೈಲ್ ಸಂಪರ್ಕಕ್ಕೆ ಆಧಾರ್ ಕಡ್ಡಾಯವನ್ನ ಎತ್ತಿಹಿಡಿದಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: 13 ಮಂದಿ ದುರ್ಮರಣ