Webdunia - Bharat's app for daily news and videos

Install App

ಜಯಲಲಿತಾ ದೇಹಸ್ಥಿತಿ ಬಹಿರಂಗಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Webdunia
ಗುರುವಾರ, 6 ಅಕ್ಟೋಬರ್ 2016 (11:29 IST)
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದ ವಿವರವನ್ನು ಬಹಿರಂಗ ಪಡಿಸುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. 

ವಾದ, ಪ್ರತಿವಾದದ ಬಳಿಕ ರಾಮಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಏನೂ ಇಲ್ಲ. ರಾಮಸ್ವಾಮಿ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆಂದು ಚಾಟಿ ಬೀಸಿತು.
 
ಜಯಾ ದೇಹ ಸ್ಥಿತಿ ಬಗ್ಗೆ ಊಹಾಪೋಹಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡುವಂತೆ ಟ್ರಾಫಿಕ್ ರಾಮಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ಜಯಾ ಆರೋಗ್ಯ ಹೇಗಿದೆ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ? ಅವರು ತಮ್ಮ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿದ್ದಾರೆಯೇ? ಅವರು ಆಸ್ಪತ್ರೆಯಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿ ಎಂದು ರಾಮಸ್ವಾಮಿ ಅರ್ಜಿಯಲ್ಲಿ ಕೇಳಿಕೊಂಡಿದ್ದರು.
 
ಮಂಗಳವಾರ  ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆಸ್ಪತ್ರೆಯಿಂದ ಮಾಹಿತಿ ಕಲೆ ಹಾಕಿ ಏನಾಗಿದೆ ಎಂಬುದನ್ನು  ಕೋರ್ಟ್ ಮೂಲಕ ಬುಧವಾರದೊಳಗೆ ಬಹಿರಂಗ ಪಡಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ತಾಕೀತು  ಮಾಡಿತ್ತು . ಆದರೆ ವಾದ ಪ್ರತಿವಾದ ಕೇಳಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.
 
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಸೆಪ್ಟೆಂಬರ್ 23 ರಿಂದ ಪತ್ರಿಕಾ ಹೇಳಿಕೆಯನ್ನು ನೀಡುತ್ತಲೇ ಬಂದಿದೆ. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments