Select Your Language

Notifications

webdunia
webdunia
webdunia
webdunia

ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

ಕೇಂದ್ರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ , ಬುಧವಾರ, 16 ಮಾರ್ಚ್ 2022 (08:24 IST)
ನವದೆಹಲಿ : ಭದ್ರತಾ ಕಾರಣಗಳಿಗಾಗಿ ಮಲಯಾಳಂ ಸುದ್ದಿ ವಾಹಿನಿ ʼಮೀಡಿಯಾ ಒನ್ʼ ಪ್ರಸಾರವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಜನವರಿ ತಿಂಗಳಲ್ಲಿ ಸುದ್ದಿ ವಾಹಿನಿ ಕಚೇರಿಯನ್ನು ಮುಚ್ಚಲು ಬಲವಂತಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಕಾರ್ಯಾಚರಣೆಯನ್ನು ನಡೆಸಲು ಸುದ್ದಿ ವಾಹಿನಿಗೆ ನಿರ್ದೇಶನ ನೀಡಿದೆ. 

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್, ವಿಕ್ರಮ್ ನಾಥ್ ಅವರಿದ್ದ ಪೀಠವು, ಮೀಡಿಯಾ ಒನ್ಗೆ ಸಂಬಂಧಿಸಿದ ಗೃಹ ವ್ಯವಹಾರಗಳ ಸಚಿವಾಲಯದ ಕಡತಗಳನ್ನು ಪರಿಶೀಲಿಸಿದ ನಂತರ ಈ ಆದೇಶ ನೀಡಿತು.

ಈ ಸಂಬಂಧ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ. ಹೈಕೋರ್ಟ್ ಆದೇಶದ ವಿರುದ್ಧ ಸುದ್ದಿ ವಾಹಿನಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಮಾ.26ರೊಳಗೆ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್- ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ