ನವದೆಹಲಿ: ಚುನಾವಣೆ ಬರುತ್ತಿದ್ದಂತೇ ರಾಜಕೀಯ ಪಕ್ಷಗಳು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿರುವುದರಿಂದ ಜನ ಕೆಲಸ ಮಾಡುವುದನ್ನೇ ಮರೆತಿದ್ದಾರೆ ಎಂದು ಸುಪ್ರೀಂಕೋರ್ಟ್ ಇಂದು ಚಾಟಿ ಬೀಸಿದೆ.
ಜಸ್ಟಿಸ್ ಬಿಆರ್ ಗವಾಯಿ ಮತ್ತು ಜಸ್ಟಿಸ್ ಅಗಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿ ಕಾರಿದ್ದಾರೆ. ಇಂಥಹ ಯೋಜನೆಗಳು ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತದೆ ಎಂದಿದ್ದಾರೆ.
ಹೇಗಿದ್ದರೂ ಉಚಿತ ರೇಷನ್, ಹಣ ಸಿಗುತ್ತಿದೆ. ಹೀಗಿರುವಾಗ ಕೆಲಸ ಯಾಕೆ ಮಾಡಬೇಕು ಎಂಬ ಮನೋಭಾವನೆಯನ್ನು ಜನರು ಬೆಳೆಸಿಕೊಳ್ಳುತ್ತಿದ್ದಾರೆ. ಇಂತಹ ಉಚಿತ ಯೋಜನೆಗಳು ಅಪಾಯಕಾರಿ ಎಂದಿದ್ದಾರೆ. ನಗರ ಪ್ರದೇಶಗಳಲ್ಲಿ ಜನರಿಗೆ ಸ್ವಂತ ಸೂರು ನೀಡುವ ಕುರಿತಾದ ಮನವಿಯೊಂದರ ವಿಚಾರಣೆ ವೇಳೆ ಸುಪ್ರೀಂ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿಮ್ಮ ಕಾಳಜಿಯನ್ನು ನಾವು ಅಭಿನಂದಿಸುತ್ತೇವೆ. ಆದರೆ ಇದರಿಂದ ದೇಶದ ಅಭಿವೃದ್ಧಿಗೆ ಅವರು ಕೊಡುಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ವಿಷಾಧ ವ್ಯಕ್ತಪಡಿಸಿದ್ದಾರೆ.