Select Your Language

Notifications

webdunia
webdunia
webdunia
webdunia

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

Lalit Modi, Founder of Indian Premier League, IPL, Directorate of Enforcement

Sampriya

ನವದೆಹಲಿ , ಸೋಮವಾರ, 30 ಜೂನ್ 2025 (14:36 IST)
Photo Credit X
ನವದೆಹಲಿ: ಇಂಡಿಯನ್ ಪ್ರೀಮಿಯರ್‌ ಲೀಗ್‌ ಸಂಸ್ಥಾಪಕ ಲಲಿತ್ ಮೋದಿ ಅವರಿಗೆ ಸೋಮವಾರ ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. 

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ-2000 ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ ವಿಧಿಸಿರುವ ₹10.65 ಕೋಟಿ ದಂಡವನ್ನು ಪಾವತಿಸಲು ಬಿಸಿಸಿಐಗೆ ನಿರ್ದೇಶನ ನೀಡುವಂತೆ ಕೋರಿ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಐಪಿಎಲ್‌ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಲಪಟಾಯಿಸಿದ ಆರೋಪವನ್ನು ಎದುರಿಸುತ್ತಿರುವ ಲಲಿತ್‌ ಮೋದಿ, ಸದ್ಯ ಲಂಡನ್‌ನಲ್ಲಿ ನೆಲೆಸಿದ್ದಾರೆ. ಅವರು, 2010ರಲ್ಲಿ ಭಾರತವನ್ನು ತೊರೆದಿದ್ದರು.

ಈ ಮಧ್ಯೆ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು ಕಾನೂನಿನ ಪ್ರಕಾರ ಲಭ್ಯವಿರುವ ನಾಗರಿಕ ಪರಿಹಾರಗಳನ್ನು ಪಡೆಯಲು ಲಲಿತ್ ಮೋದಿ ಅರ್ಹರು ಎಂದು ಅಭಿಪ್ರಾಯಪಟ್ಟಿದೆ.

2024ರ ಡಿಸೆಂಬರ್ 19ರಂದು ಇಡಿ ವಿಧಿಸಿರುವ ₹10.65 ಕೋಟಿ ದಂಡವನ್ನು ಪಾವತಿಸಲು ಬಿಸಿಸಿಐಗೆ ನಿರ್ದೇಶನ ನೀಡುವಂತೆ ಕೋರಿ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ಜತೆಗೆ, ₹1 ಲಕ್ಷ ದಂಡ ವಿಧಿಸಿತ್ತು.

ಸುಪ್ರೀಂ ಕೋರ್ಟ್‌ನ ಸ್ಪಷ್ಟ ಆದೇಶಗಳ ಹೊರತಾಗಿಯೂ ಲಲಿತ್ ಮೋದಿ ಅವರು ಕ್ಷುಲ್ಲಕ ಮತ್ತು ಸಂಪೂರ್ಣವಾಗಿ ತಪ್ಪು ಕಲ್ಪನೆ‌ಯಿಂದ ಅರ್ಜಿ ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು. ಬಳಿಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಲಲಿತ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ