Select Your Language

Notifications

webdunia
webdunia
webdunia
webdunia

ಜ್ಞಾನವಪಿ ವಿವಾದ ವಿಚಾರಣೆಗೆ ಸುಪ್ರೀಂ ತಡೆ

ಜ್ಞಾನವಪಿ ವಿವಾದ ವಿಚಾರಣೆಗೆ ಸುಪ್ರೀಂ ತಡೆ
bengaluru , ಗುರುವಾರ, 19 ಮೇ 2022 (22:29 IST)
ಕಾಶಿ ವಿಶ್ವನಾಥ್‌ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್‌ ಕೋರ್ಟ್‌ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.
ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು. ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನಾಳೆ ಈ ಬಗ್ಗೆ ವಿಚಾರಣೆ ನಡೆಸಲಾವುದು ಅಲ್ಲಿಯವರೆಗೂ ವಾರಣಸಿ ಸಿವಿಲ್ ಕೋರ್ಟ್‌ಗೆ ಅರ್ಜಿದಾರರು ಹೋಗದಂತೆ ಹಾಗೂ ಆದೇಶಕ್ಕಾಗಿ ಕೋರ್ಟ್‌ಗೆ ಒತ್ತಾಯಿಸಿದಂತೆ ತಿಳಿಸಲು ಸೂಚನೆ ನೀಡಿತು. ಅಲ್ಲದೇ ಈ ಸಂಬಂಧ ಯಾವುದೇ ಆದೇಶಗಳನ್ನು ನೀಡದಂತೆ ಸಿವಿಲ್ ಕೋರ್ಟ್‌ಗೂ ಸೂಚನೆ ನೀಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿಲ್ಲ: ಒಮರ್‌ ಅಬ್ದುಲ್ಲಾ