ಕಾಶ್ಮೀರದಲ್ಲಿ 370 ನೇ ವಿಧಿ ರದ್ದು ಸರಿಯಾ, ತಪ್ಪಾ? ಇಂದು ಸುಪ್ರೀಂ ತೀರ್ಪು

Webdunia
ಸೋಮವಾರ, 11 ಡಿಸೆಂಬರ್ 2023 (09:00 IST)
ನವದೆಹಲಿ: ಜಮ್ಮು ಮತ್ತು ಕಾಶ‍್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ 370 ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಣಯ ಸರಿಯಾ, ತಪ್ಪಾ ಎಂದು ಸುಪ್ರೀಂ ತೀರ್ಪು ನೀಡಲಿದೆ.

ಕಾಶ್ಮೀರಕ್ಕೆ ಪ್ರಥಮ ಪ್ರಧಾನಿ ನೆಹರೂ ಕಾಲದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಅದಾದ ಬಳಿಕ ಈ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದವು.

ಈ ನಿರ್ಣಯ ವಿರೋಧಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದ್ದವು. ಅವೆಲ್ಲದರ ವಿಚಾರಣೆ ನಡೆಸಿ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ತೀರ್ಪು ನೀಡಲಿದೆ.

ಈ ಸಂಬಂಧ ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಒಂದು ವೇಳೆ ತೀರ್ಪು ಕೇಂದ್ರದ ವಿರುದ್ಧ ಬಂದರೂ ಶಾಂತಿ ಕಾಪಾಡಬೇಕು ಎಂದು ಬಿಜೆಪಿ ಮುಖಂಡ ರವೀಂದ್ರ ರೈನಾ ಹೇಳಿದ್ದಾರೆ. ಅತ್ತ ವಿಧಿ ರದ್ದು ವಿರೋಧಿಸಿ ಹೋರಾಟ ನಡೆಸುತ್ತಿರುವ ಒಮರ್ ಅಬ್ದುಲ್ಲಾ ಕೂಡಾ ಶಾಂತಿಯುತವಾಗಿಯೇ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments