ನವದೆಹಲಿ: ಮಸೂದೆಗಳನ್ನು ಅಂಗೀಕರಿಸಲು ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಸಮಯ ನಿಗದಿಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸಾಂವಿಧಾನಿಕ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಸಂವಿಧಾನದ 13 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 13 ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ ಗೆ ಕೇಳಿದ್ದರು.
ಕಳೆದ ಏಪ್ರಿಲ್ ನಲ್ಲಿ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ರವಿ ನಡುವಿನ ಪ್ರಕಠಣದಲ್ಲಿ ಸುಪ್ರೀಂಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳ ಪೀಠವು, ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವುದಕ್ಕೆ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಗಡುವನ್ನು ನಿಗದಿಪಡಿಸಿತ್ತು.
ಇದನ್ನು ಪ್ರಶ್ನಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸುಪ್ರೀಂಕೋರ್ಟ್ ಗೆ 13 ಪ್ರಶ್ನೆಗಳನ್ನು ಕೇಳಿದ್ದರು. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಗಡುವು ವಿಧಿಸಬಹುದೇ ಎಂದು ಕೇಳಿದ್ದರು. ಇದಕ್ಕೀಗ ಮುಖ್ಯ ನ್ಯಾಯಮೂರ್ತಿಗಳ ಪೀಠ ಮೇಲಿನಂತೆ ತೀರ್ಪು ನೀಡಿದೆ. ಈ ತೀರ್ಪು ಈಗ ರಾಜ್ಯಪಾಲರನ್ನು ಧಿಕ್ಕರಿಸಿ ಮಸೂದೆಗಳನ್ನು ಅಂಗೀಕರಿಸುವ ರಾಜ್ಯಗಳಿಗೆ ಉತ್ತರ ಕೊಟ್ಟಂತಾಗಿದೆ.