Select Your Language

Notifications

webdunia
webdunia
webdunia
webdunia

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

stray dogs

Krishnaveni K

ನವದೆಹಲಿ , ಶುಕ್ರವಾರ, 22 ಆಗಸ್ಟ್ 2025 (11:50 IST)
ನವದೆಹಲಿ: ಬೀದಿ ನಾಯಿಗಳನ್ನು ಎತ್ತಂಗಡಿ ಮಾಡಬೇಕು ಎಂದು ತೀರ್ಪು ಕೊಟ್ಟಿದ್ದ ಸುಪ್ರೀಂಕೋರ್ಟ್ ಈಗ ಅದಕ್ಕೆ ಬದಲಾವಣೆ ತಂದಿದ್ದು ಇಂದು ಮತ್ತೊಂದು ತೀರ್ಪು ನೀಡಿದೆ.
 

ಇತ್ತೀಚೆಗೆ ದೆಹಲಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಎಲ್ಲಾ ನಾಯಿಗಳನ್ನು ಎತ್ತಂಗಡಿ ಮಾಡಬೇಕು ಎಂದು ಆದೇಶ ನೀಡಿತ್ತು. ಸುಪ್ರೀಂಕೋರ್ಟ್ ನ ಈ ಆದೇಶ ಶ್ವಾನ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ತೀರ್ಪು ಮರುಪರಿಶೀಲಿಸುವುದಾಗಿ ಹೇಳಿತ್ತು. ಅದರಂತೆ ಇಂದು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿದೆ. ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿದ ನಂತರ ಬೀದಿಯಲ್ಲಿ ಬಿಡಬಹುದು ಎಂದಿದೆ. ಬೀದಿ ನಾಯಿಗಳಿಗೆ ಲಸಿಕೆ ಮತ್ತು ಸಂತಾನ ಹರಣ ಚಿಕಿತ್ಸೆ ಮಾಡಿದ ಬಳಿಕ ಬೀದಿಯಲ್ಲಿ ಬಿಡಬಹುದು ಎಂದು ಆದೇಶ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್