Select Your Language

Notifications

webdunia
webdunia
webdunia
webdunia

ಮತಾಂತರ ತಡೆಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ಮತಾಂತರ ತಡೆಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ನವದೆಹಲಿ , ಶುಕ್ರವಾರ, 23 ಸೆಪ್ಟಂಬರ್ 2022 (14:26 IST)
ನವದೆಹಲಿ : ಆಮಿಷವೊಡ್ಡುವುದು, ಬೆದರಿಕೆಗಳ ಮೂಲಕ ಧಾರ್ಮಿಕ ಮತಾಂತರ ಮಾಡುವುದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಕೃಷ್ಣ ಮುರಾರಿ ಅವರಿರುವ ದ್ವಿಸದಸ್ಯ ಪೀಠವು ಕೇಂದ್ರ, ಗೃಹ ಸಚಿವಾಲಯ ಮತ್ತು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ನವೆಂಬರ್ 14 ರೊಳಗೆ ಉತ್ತರಿಸುವಂತೆ ಸೂಚಿಸಿದೆ. 

ಬಲವಂತದ ಮತಾಂತರವನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯಪುರ ಪುರಸಭೆ ಸದ್ಯಸನ ರಂಪಾಟ