Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

CM Siddaramaiah

Sampriya

ನವದೆಹಲಿ , ಸೋಮವಾರ, 8 ಡಿಸೆಂಬರ್ 2025 (14:57 IST)
ನವದೆಹಲಿ: ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಹೈಕೋರ್ಟ್ ವಜಾ ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಸಂಬಂಧ ಇಂದು ಸಿಎಂ ಸಿದ್ದರಾಂಯ್ಯಗೆ ಕೋರ್ಟ್ ನೋಟಿಸ್ ನೀಡಿದೆ. 

2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಆಯ್ಕೆಗೆ ಸಂಬಂಧ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆದಿದ್ದು, ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿದೆ.

ಕೆ. ಶಂಕರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿತ್ತು.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಶಂಕರ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. 

Share this Story:

Follow Webdunia kannada

ಮುಂದಿನ ಸುದ್ದಿ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ