ದ್ವೇಷ ಭಾಷಣಕ್ಕೆ ಸಂಬಂಧಿಸಿದ ಸಲ್ಲಿಕೆಯಾದ ಎಲ್ಲಾ ಅರ್ಜಿಗಳ ವಿಚಾರಣೆ ನ್ಯಾ. ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.
ಯಾರು ದೂರು ನೀಡದೇ ಇದ್ದರೂ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ಒಂದು ವೇಳೆ ಪ್ರಕರಣ ದಾಖಲಿಸದೇ ಇದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ದ್ವೇಷ ಭಾಷಣ ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್ ಇದು ದೇಶದ ಜಾತ್ಯಾತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಮೇ 12ಕ್ಕೆ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.