Select Your Language

Notifications

webdunia
webdunia
webdunia
webdunia

ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ?

ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ?
ನವದೆಹಲಿ , ಶುಕ್ರವಾರ, 28 ಜನವರಿ 2022 (13:38 IST)
ನವದೆಹಲಿ : ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ನೌಕರರಿಗೆ ಮೀಸಲಾತಿ ನಿರ್ಧರಿಸಲು ಯಾವುದೇ ಮಾನದಂಡವನ್ನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
 
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್, ಸಂಜೀವ್ ಖನ್ನಾ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠವು ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕುರಿತು ಇಂದು ತೀರ್ಪು ಪ್ರಕಟಿಸಿತು.

ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಾಗ ಎಸ್ಸಿ/ಎಸ್ಟಿ ಜನರ ಪ್ರಾತಿನಿಧ್ಯವನ್ನು ನಿರ್ಧರಿಸುವ ಕೇಂದ್ರ ಮತ್ತು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶವನ್ನು ಸಂಗ್ರಹಿಸುವ ಅಗತ್ಯವನ್ನು ತೆಗೆದುಹಾಕುವ ಕೇಂದ್ರದ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ.

ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸಲು ನಾವು ಯಾವುದೇ ಅಳತೆಗೋಲನ್ನು ರೂಪಿಸಲು ಸಾಧ್ಯವಿಲ್ಲ. ಎಸ್ಸಿ/ಎಸ್ಟಿ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸುವುದು ಸಂಬಂಧಪಟ್ಟ ರಾಜ್ಯಗಳ ಹೊಣೆಗಾರಿಕೆ. ಎಸ್ಸಿ/ಎಸ್ಟಿ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸುವುದಕ್ಕಾಗಿ ಮಾನದಂಡ ನಿರ್ಣಯಿಸಲು ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದೇವೆ ಎಂದು ನ್ಯಾಯಾಲಯ ತಿಳಿಸಿದೆ.

2021ರ ಅಕ್ಟೋಬರ್ 26ರಂದು ಕಾಯ್ದಿರಿಸಿದ್ದ ತೀರ್ಪು ಇಂದು ಪ್ರಕಟವಾಗಿದೆ. ಗ್ರೂಪ್ ʻಎʼ ನಂತಹ ಉನ್ನತ ಹುದ್ದೆಗೇರುವುದು ಎಸ್ಸಿ ಹಾಗೂ ಎಸ್ಟಿ ನೌಕರರಿಗೆ ಬಹಳ ಕಷ್ಟ. ಇಂತಹ ಉನ್ನತ ಹುದ್ದೆಗಳಿಗೆ ಎಸ್ಸಿ, ಎಸ್ಟಿ ಹಾಗೂ ಒಬಿಸಿ ನೌಕರರನ್ನು ಭರ್ತಿ ಮಾಡುವುದಕ್ಕೆ ಅನುಕೂಲ ಕಲ್ಪಿಸುವಂತಹ ವಾಸ್ತವದಿಂದ ಕೂಡಿದ ಆಧಾರವನ್ನು ಸುಪ್ರೀಂ ಕೋರ್ಟ್ ಒದಗಿಸಬೇಕು ಎಂದು ಅಕ್ಟೋಬರ್ ವಿಚಾರಣೆ ವೇಳೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ : ಮುಗ್ದ ಕಂದಮ್ಮನ ಮೇಲೆ ವಕ್ರದೃಷ್ಟಿ!