Publish Date: Mon, 15 Mar 2021 (09:41 IST)
Updated Date: Mon, 15 Mar 2021 (09:42 IST)
ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ತನ್ನ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದೆ. ಇವರಲ್ಲಿ ಮಲಯಾಳಂ ಖ್ಯಾತ ನಟ ಸುರೇಶ್ ಗೋಪಿ ಹೆಸರೂ ಸೇರಿಕೊಂಡಿದೆ.
ಸುರೇಶ್ ಗೋಪಿ ತ್ರಿಶ್ಶೂರ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಕಾಸರಗೋಡಿನ ಮಂಜೇಶ್ವರ ಮತ್ತು ಕೊನ್ನಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಸುರೇಶ್ ಗೋಪಿ ಕಳೆದ ಲೋಕಸಭೆ ಚುನಾವಣೆ ವೇಳೆಯೂ ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಅಂದು ಅವರು ಸೋಲನುಭವಿಸಿದ್ದರು. ಈಗ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟಪರೀಕ್ಷೆಗಿಳಿದಿದ್ದಾರೆ.