ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಟೀಕಿಸಿರುವುದು ಕಾಂಗ್ರೆಸ್ ಪಕ್ಷದ ವಾತಾವರಣ ಎತ್ತಿ ತೋರಿಸುತ್ತದೆ ಎಂದು ತಿರುಗೇಟು ನೀಡಿದರು.
ಸೇನೆಯ ಬಗ್ಗೆ ಹೇಳಿಕೆ ನೀಡುವುದನ್ನು ವಿಪಕ್ಷಗಳು ನಿಲ್ಲಿಸಲಿ. ಇದರಿಂದ ಸೇನಾ ಮನೋಬಲ ಕುಸಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಸೀಮಿತ ದಾಳಿ ನಡೆಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಸೇನಾಪಡೆಗಳ ಭಾವಚಿತ್ರಗಳನ್ನು ಬಿಜೆಪಿ ಪೋಸ್ಟರ್‌ಗಳಲ್ಲಿ ಬಳಸಿಕೊಳ್ಳುವುದು ಯಾವ ದೇಶಪ್ರೇಮ ಎಂದು ರಾಹುಲ್, ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ