Select Your Language

Notifications

webdunia
webdunia
webdunia
webdunia

ಅಚ್ಚರಿ : ನವಜಾತ ಶಿಶುವನ್ನು ರಕ್ಷಿಸಿದ ಶ್ವಾನ!

ಅಚ್ಚರಿ : ನವಜಾತ ಶಿಶುವನ್ನು ರಕ್ಷಿಸಿದ ಶ್ವಾನ!
ನವದೆಹಲಿ , ಬುಧವಾರ, 22 ಡಿಸೆಂಬರ್ 2021 (07:09 IST)
ರಾಯಪುರ : ಕೊರೆಯುವ ಚಳಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ನವಜಾತ ಶಿಶುವೊಂದನ್ನು ಹೊಲದಲ್ಲಿ ಬಿಟ್ಟು ಹೋಗಿದ್ದು, ರಾತ್ರಿಯಿಡೀ ನಾಯಿಯೊಂದು ಆರೈಕೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.

ಮುಂಗೇಲಿ ಜಿಲ್ಲೆಯ ಲೊರ್ಮಿಯ ಸರಿಸ್ಟಾಲ್ ಗ್ರಾಮದ ಹೊಲವೊಂದರಲ್ಲಿ ಈ ಘಟನೆ ನಡೆದಿದೆ. ಹೆಣ್ಣು ಮಗುವನ್ನು ಹೊಲದಲ್ಲಿ ಬಿಟ್ಟು ಹೋಗಲಾಗಿದ್ದು, ರಾತ್ರಿಯಿಡೀ ನಾಯಿಯೊಂದು ಆರೈಕೆ ಮಾಡುತ್ತಿತ್ತು. ಮಗುವಿನ ಅಳುವನ್ನು ಕೇಳಿದ ಗ್ರಾಮಸ್ಥರು ರಕ್ಷಿಸಿದ್ದಾರೆ.

ಮಗುವನ್ನು ಹೊಲದಲ್ಲಿ ಬಿಟ್ಟಿದ್ದಕ್ಕಾಗಿ ಜನರು ವಿರೋಧ ವ್ಯಕ್ತಪಡಿಸಿದ್ದು, ಪ್ರಾಣಿಯು ತೋರಿದ ಸಹಾನುಭೂತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೊಕ್ಕುಳಬಳ್ಳಿಯೊಂದಿಗೆ ಯಾವುದೇ ಬಟ್ಟೆ ಇಲ್ಲದೆ ಮಗುವನ್ನು ಹೊಲದಲ್ಲೇ ಬಿಟ್ಟು ಹೋಗಲಾಗಿತ್ತು. ಆಶ್ಚರ್ಯ ಎನ್ನುವಂತೆ ಪಕ್ಕದಲ್ಲಿಯೇ ಓಡಾಡುತ್ತಿದ್ದ ಬೀದಿನಾಯಿಗಳು ನವಜಾತ ಶಿಶುವನ್ನು ರಕ್ಷಿಸಿವೆ.

ಮಗುವಿನ ಅಳು ಕೇಳಿದ ಗ್ರಾಮಸ್ಥರು ನಾಯಿಮರಿಗಳ ಜೊತೆಯಲ್ಲಿ ಮಗು ಇರುವುದನ್ನು ಕಂಡಿದ್ದಾರೆ. ಯಾವುದೇ ಗಾಯಗಳಿಲ್ಲದೆ ಮಗು ಪತ್ತೆಯಾಗಿದ್ದು, ನಾಯಿಯೊಂದು ತನ್ನ ಮರಿಗಳೊಂದಿಗೆ ಮಗುವನ್ನು ಕಾವಲು ಕಾಯುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

48 ಗಂಟೆಗಳಲ್ಲಿ ಪರಿಹಾರ ಕೊಟ್ಟಿದ್ದು ಇತಿಹಾಸದಲ್ಲಿಯೇ ಮೊದಲು!