ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

Sampriya
ಭಾನುವಾರ, 23 ನವೆಂಬರ್ 2025 (13:56 IST)
Photo Credit X
ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು  ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಪೆಗಾಸಸ್ ಸ್ಪೈವೇರ್ ಪ್ರಕರಣ ಸೇರಿದಂತೆ ಹಲವು ಮಹತ್ವದ ತೀರ್ಪುಗಳು ಮತ್ತು ಆದೇಶಗಳಲ್ಲಿ ನ್ಯಾ.ಸೂರ್ಯ ಕಾಂತ್‌ ಅವರು ಭಾಗವಾಗಿದ್ದರು.

ಈತನಕ ಸಿಐಜೆ ಆಗಿದ್ದ ನ್ಯಾ.ಬಿ.ಆರ್. ಗವಾಯಿ ಅವರು ಭಾನುವಾರ ನಿವೃತ್ತಿಯಾಗಲಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್‌ ಅವರನ್ನು ನೇಮಕ ಮಾಡುವಂತೆ ಗವಾಯಿ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ನ್ಯಾಯಮೂರ್ತಿ ಕಾಂತ್ ಅವರನ್ನು ಮುಂದಿನ ಸಿಜೆಐ ಆಗಿ ಅಕ್ಟೋಬರ್ 30 ರಂದು ನೇಮಕ ಮಾಡಿತ್ತು.

ಸುಪ್ರೀಂ ಕೋರ್ಟ್‌ನ ನ್ಯಾಯ ಮೂರ್ತಿಯಾಗಿ ನ್ಯಾ. ಸೂರ್ಯಕಾಂತ್‌ ಅವರು 2019ರ ಮೇ 24ರಂದು ಬಡ್ತಿ ಪಡೆದಿದ್ದರು. ಇವರು 2027ರ ಫೆ. 9ರಂದು ನಿವೃತ್ತಿಯಾಗಲಿದ್ದಾರೆ. ಇವರು ಸುಮಾರು 15 ತಿಂಗಳವರೆಗೆ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಹರಿಯಾಣದ ಹಿಸ್ಸಾರ್‌ ಜಿಲ್ಲೆಯ ಪೆಟ್ವಾರ್ ಗ್ರಾಮದಲ್ಲಿ 1962ರ ಫೆಬ್ರುವರಿ 10ರಂದು ಜನಿಸಿದರು.ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅವರು, ಎಸ್ಸೆಸ್ಸೆಲ್ಸಿವರೆಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದಿದ್ದಾರೆ.

ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಇವುಗಳಲ್ಲಿ ವಾಕ್‌ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಭ್ರಷ್ಟಾಚಾರ, ಪರಿಸರ ಹಾಗೂ ಲಿಂಗ ಸಮಾನತೆ ಪ್ರಕರಣಗಳು ಸೇರಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್‌ ಪೀಠದ ಭಾಗವಾಗಿದ್ದರು. ವಸಾಹತು ಯುಗದ ದೇಶದ್ರೋಹ ಕಾನೂನಿಗೆ ತಡೆ ನೀಡಿದ್ದ ಪೀಠದಲ್ಲಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ