Select Your Language

Notifications

webdunia
webdunia
webdunia
webdunia

ಸುಷ್ಮಾ ಸ್ವರಾಜ್ ಇಂದು ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ

ಸುಷ್ಮಾ ಸ್ವರಾಜ್ ಇಂದು ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ
ನವದೆಹಲಿ , ಬುಧವಾರ, 27 ಏಪ್ರಿಲ್ 2016 (10:02 IST)
ಜ್ವರ ಮತ್ತು ಎದೆನೋವು  ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ (64)ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. 

ನ್ಯುಮೋನಿಯಾದಿಂದ ಬಳಲುತ್ತಿರುವ ಅವರ ಆರೋಗ್ಯ ಸಾಕಷ್ಟು ಸುಧಾರಿಸಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ. 
 
ಹಾರ್ಟ್ ಆಫ್ ಏಷ್ಯಾ- ಇಸ್ತಾಂಬುಲ್ ಪ್ರೊಸೆಸ್ ಸಮ್ಮೇಳನದಲ್ಲಿ  ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆವರು ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿದೇಶಾಂಗ ವ್ಯವಹಾರಗಳ ಖಾತೆ ಸಹಾಯಕ ಸಚಿವ ವಿ.ಕೆ ಸಿಂಗ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.
 
ಅಪ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ತರುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಸಾಲಕ್ಕಾಗಿ ದಂಪತಿ ಕೊಲೆ ಪ್ರಕರಣ: ಒಬ್ಬನ ಬಂಧನ