ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು, ದೆಹಲಿಯಲ್ಲಿರುವ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರಿಗೆ ಕಿಡ್ನಿ ಕಸಿ ಮಾಡಲು ವೈದ್ಯರು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ಕುರಿತು ಸುಷ್ಮಾ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. "ನನಗೆ ಕಿಡ್ನಿ ವೈಫಲ್ಯವಾಗಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಸಿ ಮಾಡಲು ವೈದ್ಯರು ಸಿದ್ಧತೆ ನಡೆಸಿದ್ದಾರೆ.
ಸದ್ಯ ನನಗೆ ಡಯಾಲಿಸೀಸ್ ಮಾಡಲಾಗುತ್ತಿದ್ದು ಭಗವಾನ್ ಶ್ರೀಕೃಷ್ಣನ ಶ್ರೀರಕ್ಷೆ ನನಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಎಂಡೋಕ್ರಾನಿಕಲ್ ಪರೀಕ್ಷೆಗಳಿಗಾಗಿ ನವೆಂಬರ್ 7 ರಂದು ಸುಷ್ಮಾ ಏಮ್ಸ್‌ಗೆ ದಾಖಲಾಗಿದ್ದರು.
ಸಚಿವೆ ಮಧುಮೇಹದಿಂದ ಬಳಲುತ್ತಿರುವುದರಿಂದ ಕಿಡ್ನಿಗೂ ತೊಂದರೆಯಾಗಿದೆ.ಸದ್ಯ ಡಯಾಲಿಸೀಸ್‌ಗೆ ಒಳಗಾಗುತ್ತಿರುವ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ಸುಷ್ಮಾ ಕಳೆದ ಏಪ್ರಿಲ್ ತಿಂಗಳಲ್ಲಿ ಶ್ವಾಶಕೋಶ ಸಂಬಂಧಿ ಕಾಯಿಲೆಗೆ ತುತ್ತಾಗಿ ಏಮ್ಸ್‌ಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ