Webdunia - Bharat's app for daily news and videos

Install App

ಸಚಿವೆ ಸುಷ್ಮಾ ಸ್ವರಾಜ್‌ಗೆ ಕಿಡ್ನಿ ವೈಫಲ್ಯ

Webdunia
ಬುಧವಾರ, 16 ನವೆಂಬರ್ 2016 (10:34 IST)
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು, ದೆಹಲಿಯಲ್ಲಿರುವ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 
ಅವರಿಗೆ ಕಿಡ್ನಿ ಕಸಿ ಮಾಡಲು ವೈದ್ಯರು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ಕುರಿತು ಸುಷ್ಮಾ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. "ನನಗೆ ಕಿಡ್ನಿ ವೈಫಲ್ಯವಾಗಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಸಿ ಮಾಡಲು ವೈದ್ಯರು ಸಿದ್ಧತೆ ನಡೆಸಿದ್ದಾರೆ.
ಸದ್ಯ ನನಗೆ ಡಯಾಲಿಸೀಸ್ ಮಾಡಲಾಗುತ್ತಿದ್ದು ಭಗವಾನ್ ಶ್ರೀಕೃಷ್ಣನ ಶ್ರೀರಕ್ಷೆ ನನಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
 
ಎಂಡೋಕ್ರಾನಿಕಲ್ ಪರೀಕ್ಷೆಗಳಿಗಾಗಿ ನವೆಂಬರ್ 7 ರಂದು ಸುಷ್ಮಾ ಏಮ್ಸ್‌ಗೆ ದಾಖಲಾಗಿದ್ದರು.
 
ಸಚಿವೆ ಮಧುಮೇಹದಿಂದ ಬಳಲುತ್ತಿರುವುದರಿಂದ ಕಿಡ್ನಿಗೂ ತೊಂದರೆಯಾಗಿದೆ.ಸದ್ಯ ಡಯಾಲಿಸೀಸ್‌ಗೆ ಒಳಗಾಗುತ್ತಿರುವ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. 
 
ಸುಷ್ಮಾ ಕಳೆದ ಏಪ್ರಿಲ್ ತಿಂಗಳಲ್ಲಿ ಶ್ವಾಶಕೋಶ ಸಂಬಂಧಿ ಕಾಯಿಲೆಗೆ ತುತ್ತಾಗಿ ಏಮ್ಸ್‌‌ಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments