Daily Horoscope

Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸುವೇಂದು ಅಧಿಕಾರಿ

Suvendu Adhikari
Photo Credit: X
ಕೋಲ್ಕತ್ತಾ: ಪಶ್ಚಿಮ ಬಂಗಾಲದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಬಂಗಾಲದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಕೋಲ್ಕತ್ತಾ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಈ ಮೂಲಕ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಯುಗ ಆರಂಭವಾಗಿದೆ.

ಬಿಜೆಪಿ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ಈ ಕ್ಷಣಕ್ಕೆ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾಗಿದ್ದಾರೆ. ಸುವೇಂದು ಪ್ರಮಾಣ ವಚನ ಸ್ವೀಕಾರ ಬಳಿಕ ಅಮಿತ್ ಶಾ ಬಿಗಿದಪ್ಪಿ ಸನ್ಮಾನಿಸಿ ಸಂಭ್ರಮಿಸಿದ್ದಾರೆ.

ಈ ಬಾರಿ ಪಶ್ಚಿಮ ಬಂಗಾಲ ಚುನಾವಣೆಯಲ್ಲಿ ಬಿಜೆಪಿ 206 ಸ್ಥಾನ ಗಳಿಸಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ನಿನ್ನೆಯಷ್ಟೇ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿಯವರನ್ನು ಸಿಎಂ ಎಂದು ಘೋಷಣೆ ಮಾಡಲಾಗಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ