ತಾಷ್ಕೆಂಟ್ : ಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಹೊರಿಸಲಾಗಿತ್ತು.
ಇದೀಗ ಉಜ್ಬೇಕಿಸ್ತಾನವೂ ಕೂಡಾ ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್ನ ಪಾತ್ರವಿದೆ ಎಂದು ಆರೋಪಿಸಿದೆ.
ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ.
ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ.