Select Your Language

Notifications

webdunia
webdunia
webdunia
webdunia

ಸಿಕ್ಕಿಂ ಮುಖ್ಯಮಂತ್ರಿಯಾಗಿ ತಮಾಂಗ್‌ ಪ್ರಮಾಣವಚನ: ಪ್ರಧಾನಿ ಮೋದಿ ಅಭಿನಂದನೆ

sikkim chief minister

sampriya

ನವದೆಹಲಿ , ಸೋಮವಾರ, 10 ಜೂನ್ 2024 (18:34 IST)
Photo By X
ನವದೆಹಲಿ: ಸಿಕ್ಕಿಂ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರೇಮ್‌ ಸಿಂಗ್‌ ತಮಾಂಗ್‌ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮಾಂಗ್‌ ಅವರನ್ನು ಅಭಿನಂದಿಸಿದ್ದಾರೆ.

ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರೇಮ್‌ ಸಿಂಗ್‌ ತಮಾಂಗ್‌ ಅವರಿಗೆ ಅಭಿನಂದನೆಗಳು. ಅಧಿಕಾರದ ಅವಧಿ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ. ಸಿಕ್ಕಿಂ ಪ್ರಗತಿಗಾಗಿ, ಅವರ (ತಮಾಂಗ್‌) ಜೊತೆ ಕೆಲಸ ಮಾಡಲು ಎದುರುನೋಡುತ್ತಿದ್ದೇನೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

56 ವರ್ಷದ ತಮಾಂಗ್‌, ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ತಮಾಂಗ್‌ ಅವರ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಪಕ್ಷ ಭಾರಿ ಬಹುಮತ ಸಾಧಿಸಿದೆ. ಇಲ್ಲಿನ 32 ವಿಧಾನಸಭಾ ಕ್ಷೇತ್ರಗಳ ಪೈಕಿ 31ರಲ್ಲಿ ಗೆದ್ದು ಅಧಿಕಾರದಲ್ಲಿ ಮುಂದುವರಿದಿದೆ.

1994ರಿಂದ 2019ರ ವರೆಗೆ (25 ವರ್ಷ) ಅಧಿಕಾರದಲ್ಲಿದ್ದ, ಸಿಕ್ಕಿಂ ಡೆಮಾಕ್ರಟಿಕ್‌ ಫ್ರಂಟ್‌ (ಎಸ್‌ಡಿಎಫ್) ಕೇವಲ 1 ಸ್ಥಾನವನ್ನಷ್ಟೇ ಗೆದ್ದಿದೆ. ಇಲ್ಲಿನ ಏಕೈಕ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಿರುವ ಎಸ್‌ಕೆಎಂ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ: ಶುಭಾಶಯ ಕೋರಿದ ಪಾಕ್ ಪ್ರಧಾನಿ ಶೆಹಬಾಜ್