Select Your Language

Notifications

webdunia
webdunia
webdunia
webdunia

ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಗೆ ದಾಖಲು

Tamil Nadu
ಚೆನ್ನೈ , ಶುಕ್ರವಾರ, 23 ಸೆಪ್ಟಂಬರ್ 2016 (09:17 IST)
ತಮಿಳುನಾಡು ಮುಖ್ಯಮಂತ್ರಿ, ಎಐಡಿಎಂಕೆ ಮುಖ್ಯಸ್ಥೆ ಜೆ. ಜಯಲಲಿತಾ (68) ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. 
ಅವರು ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು ನಿನ್ನೆ ತಡರಾತ್ರಿಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
 
ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿಟ್ಟು ನೋಡಿಕೊಳ್ಳಲಾಗುತ್ತಿದೆ ಎಂದು ಅಪೋಲೊ ಆಸ್ಪತ್ರೆ ಮುಖ್ಯ ನಿರ್ವಹಣಾ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ. 
 
'ಅಮ್ಮ' ಆಸ್ಪತ್ರೆ ಸೇರಿರುವುದರಿಂದ ಆತಂಕಕ್ಕೆ ಒಳಗಾಗಿರುವ ನೂರಾರು ಅನುಯಾಯಿಗಳು, ಕಾರ್ಯಕರ್ತರು ಆಸ್ಪತ್ರೆಯ ಮುಂದೆ ಜಮಾಯಿಸಿದ್ದು, ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. 
 
ಈ ಹಿಂದೆ ಕೂಡ ಅವರ ಅನಾರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರುವ ಬಗ್ಗೆ ಅಧಿಕೃತ ಪ್ರಕಟನೆಯನ್ನು ಹೊರಡಿಸಿರುವುದು ಇದೇ ಮೊದಲು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮಗುವನ್ನು ನೀರಿಗೆಸೆದು ಕೊಂದವನಿಗೆ 100 ವರ್ಷ ಜೈಲು