Webdunia - Bharat's app for daily news and videos

Install App

ಆತ್ಮಹತ್ಯೆಗೆ ಯತ್ನಿಸಿದ ತಮಿಳುನಾಡು ಸಂಸದ ಗಣೇಶಮೂರ್ತಿ ಸಾವು

Krishnaveni K
ಗುರುವಾರ, 28 ಮಾರ್ಚ್ 2024 (10:09 IST)
Photo Courtesy: Twitter
ಚೆನ್ನೈ: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಕೀಟನಾಶಕ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿತ್ತು. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆಯಿಂದ ಈರೋಡ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆದರೆ ಮೊನ್ನೆ ಮಧ‍್ಯಾಹ್ನ ತೀವ್ರ ಅಸ್ವಸ್ಥರಾದ ಅವರನ್ನು ಕುಟುಂಬಸ್ಥರು ಕೊಯಮತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅವರ ಸ್ಥಿತಿ ಚಿಂತಾಜನಕವಾಗಿತ್ತು.

ಗಣೇಶಮೂರ್ತಿ ನೋಡಲು ಆಸ್ಪತ್ರೆಗೆ ಡಿಎಂಕೆ ನಾಯಕರು ಧಾವಿಸಿ ಬಂದಿದ್ದರು. ಆದರೆ ಅವರು ಈ ರೀತಿ ನಿರ್ಧಾರಕ್ಕೆ ಬರಲು ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments