Publish Date: Mon, 28 Nov 2016 (15:51 IST)
Updated Date: Mon, 28 Nov 2016 (15:53 IST)
ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಜಾಗತಿಕ ಉಗ್ರಗಾಮಿ ಸಂಘಟನೆ ಅಲ್‌ಕೈದಾಗೆ ಸೇರಿದ ಮೂವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಅಲ್-ಕೈದಾ ಉಗ್ರರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮೂವರು ಉಗ್ರರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರ ವಿಚಾರಣೆಯಲ್ಲಿ ಉಗ್ರರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರೊಂದಿಗೆ ಸಂಪರ್ಕ ಹೊಂದಿದವರನ್ನು ಬಂಧಿಸಲು ಉಗ್ರರಿಂದ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.