ನವದೆಹಲಿ : ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಕುರಿತ ಸಿನಿಮಾ ʼದಿ ಕಾಶ್ಮೀರ್ ಫೈಲ್ಸ್ʼಗೆ ರಾಷ್ಟ್ರ ರಾಜಧಾನಿಯಲ್ಲೂ ತೆರಿಗೆ ವಿನಾಯಿತಿ ಘೋಷಿಸಬೇಕು ಎಂಬ ಬಿಜೆಪಿ ಶಾಸಕರ ಒತ್ತಾಯಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.
ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿಯವರು ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದಾರೆ.
ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ.
ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.