Select Your Language

Notifications

webdunia
webdunia
webdunia
webdunia

ಮುಂಬೈನ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ: ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದೇನು

Railway Department

Sampriya

ಮುಂಬೈ , ಶುಕ್ರವಾರ, 24 ಜನವರಿ 2025 (14:12 IST)
Photo Courtesy X
ಮುಂಬೈ: ನಾಲ್ಕು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ರೈಲು ಅವಘಡದಲ್ಲಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ರೈಲ್ವೆ ಇಲಾಖೆ ಮೃತರ ಕುಟುಂಬಸ್ಥರಿಗೆ ₹1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದೆ. ಆದರೆ, ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಹವಾಮಾನ: ಇಂದಿನಿಂದ ವಾತಾವರಣದಲ್ಲಿ ಬದಲಾವಣೆ, ಮಳೆಯಿರುತ್ತಾ