Daily Horoscope

ತಾಂತ್ರಿಕ ದೋಷ: ಟೇಕ್ ಆಫ್ ಆದ ಬೆನ್ನಲ್ಲೇ ಕೆಳಗಿಳಿದ ಏರ್ ಇಂಡಿಯಾ ವಿಮಾನ

Webdunia
ಸೋಮವಾರ, 13 ಸೆಪ್ಟಂಬರ್ 2021 (12:05 IST)
ತಿರುವನಂತಪುರಂ : ಇಲ್ಲಿಂದ ಶಾರ್ಜಾಗೆ 170 ಪ್ರಯಾಣಿಕರೊಂದಿಗೆ ಸೋಮವಾರ ಸಂಚಾರ ಆರಂಭಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸಾಯಿತು.

ವಿಮಾನದಲ್ಲಿ ಆರು ಮಂದಿ ಸಿಬ್ಬಂದಿ ಇದ್ದರು. ತಾಂತ್ರಿಕ ದೋಷ ಕಾಣಿಸಿಕೊಂಡಿದ್ದನ್ನು ಗುರುತಿಸಿದ ಅವರು ವಿಮಾನ ವನ್ನು ಸರುಕ್ಷಿತವಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಳಿಸಿದರು. ನಂತರ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಿ ಕಳುಹಿಸಲಾಯಿತು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್(ಎಐಇ) ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ವಿಮಾನ ಟೇಕ್ ಆಫ್ ಆದ ಅರ್ಧ ಗಂಟೆಯೊಳಗೆ ಪೈಲಟ್ಗಳು ತಾಂತ್ರಿಕ ದೋಷವನ್ನು ಗುರುತಿಸಿದ್ದಾರೆ. ನಂತರ ತಕ್ಷಣ ವಿಮಾನವನ್ನು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಳಿಸಲು ತೀರ್ಮಾನ ಕೈಗೊಂಡಿದ್ದಾರೆ ಎಂದು ಎಐಇ ವಕ್ತಾರರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments