Select Your Language

Notifications

webdunia
webdunia
webdunia
webdunia

ಹೊಸ ವರ್ಷಾಚರಣೆಯಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಹೊಸ ವರ್ಷಾಚರಣೆಯಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ನವದೆಹಲಿ , ಬುಧವಾರ, 4 ಜನವರಿ 2017 (14:34 IST)
ಕಳೆದ ಡಿಸೆಂಬರ್ 31 ರಂದು ಹೊಸ ವರ್ಷಾಚರಣೆ ಸಂದರ್ಭದಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. 
 
ನಗರದ ಆನಂದ್ ಪರಭಾತ್ ಪ್ರದೇಶದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು 13 ವರ್ಷದ ಬಾಲಕಿಯನ್ನು ಸಾರ್ವಜನಿಕ ಶೌಚಾಲಯದೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು.
 
ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮನೆಯ ಹತ್ತಿರದಲ್ಲಿರುವ ಕಿರಾಣಿ ಅಂಗಡಿಗೆ ವಸ್ತುಗಳನ್ನು ಖರೀದಿಸಲು ತೆರಳುತ್ತಿದ್ದ ಬಾಲಕಿಯನ್ನು ಸಾರ್ವಜನಿಕ ಶೌಚಾಲಯದಲ್ಲಿ ಬಳಿ ನಿಲ್ಲಿಸಿದ ಇಬ್ಬರು ಅಪ್ರಾಪ್ತರು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಘಟನೆಯ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
 
ಅತ್ಯಾಚಾರಗೊಳಗಾದ ಬಾಲಕಿ ಮನೆಗೆ ಮರಳಿ ತಾಯಿಗೆ ಹೊಟ್ಟೆ ನೋವಾಗುತ್ತಿದೆ ಎಂದು ತಿಳಿಸಿದ್ದಾಳೆ. ಕೂಡಲೇ ತಾಯಿ ಬಾಲಕಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಆಕೆ ಅತ್ಯಾಚಾರಗೊಳಗಾಗಿರುವುದು ಪತ್ತೆಯಾಗಿದೆ.
 
ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಮುಖ್ಯ ನ್ಯಾಯಾಧೀಶರಾದ ನ್ಯಾ. ಜಗದೀಶ್ ಸಿಂಗ್ ಖೇಹರ್