17 ವರ್ಷದ ಹದಿಹರೆಯದ ಯುವತಿಯನ್ನು ಆಕೆಯ ಸ್ನೇಹಿತನೇ ಗುಂಡಿಕ್ಕಿ ಹತ್ಯೆಗೈದ ಕರಾಳ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ನಜಾಫ್ ಗಢ ಪ್ರದೇಶದಲ್ಲಿ ಈ ಕೃತ್ಯವನ್ನೆಗಲಾಗಿದ್ದು ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಹತ್ಯೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಾಗಿ ಬಲೆ ಬೀಸಿರುವ ಪೊಲೀಸರು ಯುವತಿ ಕೊಲೆ ಹಿಂದಿನ ಉದ್ದೇಶವಿನ್ನು ಕೂಡ ಸ್ಪಷ್ಟವಾಗಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ