Publish Date: Mon, 13 Mar 2023 (10:13 IST)
Updated Date: Mon, 13 Mar 2023 (11:15 IST)
ಹೈದರಾಬಾದ್ : ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಭಾನುವಾರ ಹೊಟ್ಟೆನೋವಿನ ಹಿನ್ನೆಲೆ ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ್ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥ ಕೆಸಿಆರ್ ಅವರು ಹೊಟ್ಟೆನೋವಿನ ಹಿನ್ನೆಲೆ ನಗರದ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಟ್ಟೆಯಲ್ಲಿ ಕಂಡುಬಂದಿರುವ ಹುಣ್ಣಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಇದನ್ನು ಹೊರತುಪಡಿಸಿ ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಸೂಕ್ತವಾದ ಔಷಧಿ ನೀಡಲಾಗುತ್ತಿದೆ ಎಂದಿದ್ದಾರೆ.