Select Your Language

Notifications

webdunia
webdunia
webdunia
webdunia

ಟೆಂಪೋ ಕಂದಕಕ್ಕೆ ಬಿದ್ದು 7 ವಿದ್ಯಾರ್ಥಿಗಳ ದುರ್ಮರಣ!

ಟೆಂಪೋ ಕಂದಕಕ್ಕೆ ಬಿದ್ದು 7 ವಿದ್ಯಾರ್ಥಿಗಳ ದುರ್ಮರಣ!
ಶಿಮ್ಲಾ , ಸೋಮವಾರ, 26 ಸೆಪ್ಟಂಬರ್ 2022 (08:56 IST)
ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಟೂರಿಸ್ಟ್ ಟೆಂಪೋ ಟ್ರಾವೆಲರ್ ಒಂದು ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 10 ಜನರು ಗಾಯಗೊಂಡಿದ್ದಾರೆ.

ಘಟನೆ ಹಿಮಾಚಲ ಪ್ರದೇಶದ ಕುಲುವಿನ ಜಲೋಡಿ ಪಾಸ್ ಬಳಿ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ.

ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಆಮ್ಲಜನಕ ಕೊರತೆಯಿಂದ ಬೀದರ್ ಮೂಲದ ಯೋಧ ಹುತಾತ್ಮ