Webdunia - Bharat's app for daily news and videos

Install App

ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾಧವ್‌ ಪ್ರಕರಣ: ತನಿಖೆಯಲ್ಲಿ ಬಯಲಾಯಿತು ಮಹಾಸತ್ಯ

Sampriya
ಶನಿವಾರ, 12 ಜುಲೈ 2025 (22:47 IST)
ಗುರುಗ್ರಾಮ: ಹರಿಯಾಣದಲ್ಲಿ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ತಂದೆಯೇ ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣ ಸಂಬಂಧ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಆಕೆ ಸ್ವಂತ ಅಕಾಡೆಮಿ ಹೊಂದಿರಲಿಲ್ಲ. 

ಮಗಳ ಆದಾಯದಿಂದ ಬದುಕು ಕಟ್ಟುತ್ತಿದ್ದಾನೆಂಬ ನೆರೆಹೊರೆಯವರ ನಿಂದನೆಯಿಂದ ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾಳನ್ನು ತಂದೆಯೇ ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿತ್ತು. 

ಇದೀಗ ತನಿಖೆ ವೇಳೆ ಸಿಕ್ಕಿರುವ ಮಾಹಿತಿ ಪ್ರಕಾರ ಹರಿಯಾಣದ ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್‌ ಸ್ವಂತ ಅಕಾಡೆಮಿ ಹೊಂದಿರಲಿಲ್ಲ. ಕಲಿಕಾರ್ಥಿಗಳಿಗೆ ವಿವಿಧ ಪ್ರದೇಶದಲ್ಲಿರುವ ಟೆನ್ನಿಸ್‌ ಮೈದಾನಗಳಲ್ಲಿ ತರಬೇತಿ ನೀಡುತ್ತಿದ್ದರು. ಇದಕ್ಕೂ ಆಕೆಯ ತಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.

ಗುರುಗ್ರಾಮದ ಸುಶಾಂತ್‌ ಲೋಕ್‌ ಪ್ರದೇಶದಲ್ಲಿರುವ ಎರಡು ಮಹಡಿಯ ಕಟ್ಟಡದಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದ ರಾಧಿಕಾ ಅವರನ್ನು ತಂದೆ ದೀಪಕ್‌ ಯಾದವ್‌ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ವಿವಿಧ ಕಟ್ಟಡಗಳ ಬಾಡಿಗೆಯಿಂದ ಸಾಕಷ್ಟು ಆದಾಯ ಪಡೆಯುತ್ತಿದ್ದ ಅವರು, ಮಗಳ ದುಡಿಮೆ ಮೇಲೆ ಅವಲಂಬಿತರಾಗಿ ಇರಲಿಲ್ಲ. ಅಕಾಡೆಮಿಗಳಲ್ಲಿ ತರಬೇತಿ ಮೂಲಕ ಮಗಳು ಹಣ ಸಂಪಾದಿಸುತ್ತಿದ್ದ ವಿಚಾರಕ್ಕೆ ಹಲವು ಸಲ ಆಕ್ಷೇಪ ವ್ಯಕ್ತಪಡಿಸಿದ್ದರು. ತರಬೇತಿ ಸ್ಥಗಿತಗೊಳಿಸಲು ಮಗಳು ಕೂಡ ಒಪ್ಪಿರಲಿಲ್ಲ. ಈ ವಿಚಾರವೇ ಇಬ್ಬರ ನಡುವೆ ಮನಃಸ್ತಾಪಕ್ಕೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. 

ಸೆಕ್ಟರ್‌ 56ರ ಪೊಲೀಸ್‌ ಠಾಣಾ ಇನ್‌ಸ್ಪೆಕ್ಟರ್‌ ವಿನೋದ್‌ ಕುಮಾರ್‌ ನೀಡಿದ ಸ್ಪಷ್ಟೆ ಪ್ರಕಾರ 2023 ರಲ್ಲಿ ರಾಧಿಕಾ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ವಿಡಿಯೊಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ. ತರಬೇತಿಯ ಮೂಲಕ ಮಗಳು ಸಂಪಾದನೆ ಮಾಡುವುದನ್ನು ನೋಡಲು ತಂದೆ ಬಯಸಿರಲಿಲ್ಲ ಎಂದು ಹೇಳಿದ್ದಾರೆ. 

ರಾಧಿಕಾಳ ಹಿಂಬದಿಯಿಂದ ಮೂರು ಹಾಗೂ ಭುಜಕ್ಕೆ ಒಂದು ಗುಂಡು ತಗುಲಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಂತ್ಯಕ್ರಿಯೆಯು ಶುಕ್ರವಾರ ಕುಟುಂಬಸ್ಥರ ಸ್ವಗ್ರಾಮ ವಾಜೀರಾಬಾದ್‌ನಲ್ಲಿ ನಡೆಯಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments